BIG BREAKING : ರಾಜ್ಯದಲ್ಲಿ ಇಂದು 7012 ಜನರಿಗೆ ಕೊರೋನಾ : ಸಕ್ರೀಯ ಸೋಂಕಿತರ ಸಂಖ್ಯೆ 1,09,264 – Kannada News Now


State

BIG BREAKING : ರಾಜ್ಯದಲ್ಲಿ ಇಂದು 7012 ಜನರಿಗೆ ಕೊರೋನಾ : ಸಕ್ರೀಯ ಸೋಂಕಿತರ ಸಂಖ್ಯೆ 1,09,264

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ಮುಂದುವರೆದಿದೆ. ಇಂದು ಹೊಸದಾಗಿ 7012 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7,65.586ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 3535 ಜನರು ಸೇರಿದಂತೆ ರಾಜ್ಯದಲ್ಲಿ  ಹೊಸದಾಗಿ 7012 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 8344 ಸೋಂಕಿತರು ಸೇರಿದಂತೆ ಇದುವರೆಗೆ 6,45,825 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 1,09,264 ಸಕ್ರೀಯ ಸೋಂಕಿತರಿರುವುದಾಗಿ ತಿಳಿಸಿದೆ.

ಇನ್ನೂ ಇಂದು ಬೆಂಗಳೂರು ನಗರದಲ್ಲಿ 25 ಸೋಂಕಿತರು ಸೇರಿದಂತೆ ಒಟ್ಟು 51 ಜನರು ಸಾವನ್ನಪ್ಪುವ ಮೂಲಕ, ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವ ಸಂಖ್ಯೆ 10,478ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.




error: Content is protected !!