ಬೆಂಗಳೂರು: ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಇಂದು ಸಂಜೆ 7.30ಕ್ಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ.
ಇಂದು ಸಂಜೆ 7.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಕುರಿತಂತೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದ್ರೆ ಸಂಭ್ರಮಾಚಾರಣೆಗೂ ಸಮುದಾಯದವರು ಸಿದ್ಧರಾಗಿದ್ದಾರೆ.
ಇನ್ನೊಂದು ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಅಲ್ಲದೇ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಲಾಗಿದೆ.
ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ-2025’ ಅಂಗೀಕಾರ
BREAKING: ಇಂದು ಸಂಜೆ 5ಕ್ಕೆ ನಡೆಯಬೇಕಿದ್ದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ 7.30ಕ್ಕೆ ಮುಂದೂಡಿಕೆ