ತುಮಕೂರು : ಇಂದು ತುಮಕೂರು ಜಿಲ್ಲೆಯ ಪಾವಗಡಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ತುಂಗಭದ್ರಾ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ವಿವಿಧ ಕಾಮಗಾರಿಗಳ ಉದ್ಘಾಟನೆಯ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ತುಮಕೂರು ಜಿಲ್ಲೆಯ ಪಾವಗಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಪಾವಗಡ ತಾಲೂಕಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಈ ಒಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ತುಂಗಭದ್ರಾ ಕುಡಿಯುವ ನೀರಿನ ಯೋಜನೆಗೆ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.