Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ‘ಸಿಎಂ ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highlights
KARNATAKA

ಹೀಗಿದೆ ಇಂದಿನ ‘ಸಿಎಂ ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting Highlights

By kannadanewsnow0909/10/2025 2:34 PM

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ..

2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ.

“ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ.

ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸು ವುದಕ್ಕಾಗಿ 38.33 ಕೋಟಿಗಳ ಅಂದಾಜು ಮೊತ್ತದಲ್ಲಿ ಹೊಸ ತಂತ್ರಾಂಶಗಳನ್ನು ಅಳವಡಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಮಾಚೋಹಳ್ಳಿ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದ ಸರ್ವೆ ನಂ.81ರಲ್ಲಿ ಒಟ್ಟು 78 ಎಕರೆ ಅರಣ್ಯ ಪ್ರದೇಶವನ್ನು ದಿನಾಂಕ 06.01.1964ರಲ್ಲಿ ಕಂದಾಯ ಇಲಾಖೆಗೆ ಬಿಡುಗಡೆಗೊಳಿಸಲಾಗಿದ್ದು, ಕಂದಾಯ ಇಲಾಖೆಯು ದಿನಾಂಕ: 18.12.20170 ಆದೇಶದಲ್ಲಿ ಸದರಿ ಜಮೀನನ್ನು ವಿವಿಧ ಸಂಸ್ಥೆಗಳಿಗೆ ಮಂಜೂರು ಮಾಡಿದ್ದು, ಸದರಿ ಆದೇಶಗಳನ್ನು ಹಿಂಪಡೆಯಲು ( ಮುಂದೂಡಿಕೆ) ಮಾಡಲಾಗಿದೆ.

ಕೇಂದ್ರ ಪುರಸ್ಕೃತ ICJS-2.0 (Inter-Operable Criminal Justice System 2.0) ಯೋಜನೆಯಡಿ ಕೇಂದ್ರ ಗೃಹ ಮಂತ್ರಾಲಯವು ಮಂಜೂರು ಮಾಡಿರುವ 89.22 ಕೋಟಿಗಳ ಮೊತ್ತದಲ್ಲಿ ಉಪಕರಣಗಳನ್ನು ಪೊಲೀಸ್ ಗಣಕ ವಿಭಾಗದ ವತಿಯಿಂದ ಖರೀದಿಸಲು ಹಾಗೂ ತರಬೇತಿ ಹಾಗೂ ಇತರೆ ಕಾರ್ಯಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ನೀಡಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿಗಳ ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದಿಸಿದೆ.

ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNCಗಳು, IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತು ಚಕ್ರ ರಜೆ ನೀತಿ 2025” (Menstrual Leave Policy, 2025)ನ್ನು ಜಾರಿಗೆ ತರಲು ಅಸ್ತು ಎಂದಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಕೆ ಅನುಮೋದನೆ ನೀಡಲು ಅನುಮೋದನೆ ನೀಡಲಾಗಿದೆ.

ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು ರೂ. 2000 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ/ನಿರ್ಮಾಣ ಕಾಮಗಾರಿಗಳನ್ನು ರೂ.1000 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರಿವೋಬನಹಳ್ಳಿಯಿಂದ ವತಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ 52-54 ಮೀಟರ್ ಎತ್ತರಕ್ಕೆ ತಲುಪುವ Aerial Ladder Platform Vehicleನ್ನು 16.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಿದೆ.

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಬಿಸಲು ಮತ್ತು ಅವ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರಾಜಕನಾಲ್ ಮತ್ತು ಹಂತ-11 ರಲ್ಲಿ 40 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP), ಟರ್ಮಿನಲ್ ತ್ಯಾಜ್ಯ ನೀರಿನ ಯಂತ್ರಗಾರ (TSPS) ಮತ್ತು ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಗಾರದೆ (ISPS) ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಸಮಗ್ರ (O&M)ಯನ್ನು ರೂ.29.70 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳುವ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆ 2 1668.80 2. Ơ ಜಿಲ್ಲೆಯ ಅಫಜಲ್‌ಪುರ ಪುರಸಭೆ ವ್ಯಾಪ್ತಿಯಲ್ಲಿ 1120.60 ಚ.ಮೀ, ಧಾರವಾಡ ಜಿಲ್ಲೆಯ ನಲವಗುಂದ ಪುರಸಭೆ ವ್ಯಾಪ್ತಿಯಲ್ಲಿ 1287.77 ಚ.ಮೀ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200.00 ಚ.ಅಡಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲಾಗಿದೆ.

ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ PPP ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿ ಪಡಿಸಲು ಅನುಮೋದನೆ. 30 ವರ್ಷಗಳವರೆಗೆ ವಿಸ್ತರಿಸುವ 135 ಕೋಟಿ ರೂ. ವೆಚ್ಚದ ಯೋಜಬೆ ಇದಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ಸ.ನಂ.666 ರಲ್ಲಿನ 9-00 ಎಕರೆ ಗಾಯರಾಣ ಜಮೀನನ್ನು ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠ (ಶಿಕ್ಷಣ ಸಂಸ್ಥೆ) ಘೋಡಗೇರಿ ರವರಿಗೆ ಮಂಜೂರು ಮಾಡಿದೆ.

ಸಿಪಿಸಿ ಪಾಲಿಟೆಕ್ನಿಕ್, ಮೈಸೂರು ಸಂಸ್ಥೆಯ ಕಟ್ಟಡದ ನವೀಕರಣ & ಹೊಸ ಸಂಸ್ಥೆಯ ಕಟ್ಟಡದ ನವೀಕರಣ & ಆಡಿಟೋರಿಯಮ್ ಅನ್ನು ಒಳಗೊಂಡಂತೆ ಮೂಲಭೂತ ಸೌಕರ್ಯಗಳನ್ನು ತಲಾ ರೂ.70 ಕೋಟಿಗಳು ಹಾಗೂ ರೂ.50 ಕೋಟಿಗಳ ಮೊತ್ತದಲ್ಲಿ ಒದಗಿಸಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೀಜ ನಿಗಮದ ಸಾಲಕ್ಕೆ ಸರ್ಕಾರದ ಶೂರಿಟಿ, ಗೊಬ್ಬರ ದಾಸ್ತಾನು ಮಾಡಲು 200 ಕೋಟಿ ಸಾಲ. ಸಾಲ ಪಡೆಯಲು ಸರ್ಕಾರದ ಶೂರಿಟಿ. ಕೃಷಿ ಸಿಂಚಯ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ರಾಜ್ಯದ 15 ತಾಲೂಕುಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. 90 ಕೋಟಿ ಅನುದಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. 39416 ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿಯಾಗಲಿದೆ. ಇದಕ್ಕೆ ಸಿಎಂ ನೇತೃತ್ವದ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

ಸಿವಿಲ್ ಸೇವೆ ಹುದ್ದೆಗಳ ನೇಮಕಾತಿ ವಯೋಮಿತಿ ಸಡಿಲಿಗೆ ನಿರ್ಧಾರ ಕೈಗೊಳ್ಳಲಾಗಿದೆ. ನೇರ ನೇಮಕಾತಿಯಲ್ಲಿ 3 ವರ್ಷ ಸಡಿಲಿಕೆ ಮಾಡಲಾಗುತ್ತಿದೆ. ಎಲ್ಲಾ ಪ್ರವರ್ಗಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತಿದೆ. ಸಂಪುಟದಿಂದ ಘಟನೋತ್ತರ ಅನುಮೋದನೆ ನೀಡಲಾಗಿದೆ. ಸೈಬರ್ ಭದ್ರತೆ ಬಲಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ದತ್ತಾಂಶ ಅಳವಡಿಕೆಗೆ ಅನುಮತಿ ನೀಡಲಾಗಿದೆ. ಇದಕ್ಕೆ 28.33 ಕೋಟಿ ವೆಚ್ಷದಲ್ಲಿ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ ಎಂದರು.

ಮಾಚೋಹಳ್ಳಿ ಅರಣ್ಯ ಭೂಮಿ ವಾಪಸ್ ಗೆ ನಿರ್ಧರಿಸಲಾಗಿದೆ. ಕಂದಾಯ ಇಲಾಖೆಗೆ ನೀಡಿದ್ದ 78 ಎಕರೆ ಇದಾಗಿದೆ. ಭೂಮಿ ವಾಪಸ್ ಗೆ ಅರಣ್ಯ ಇಲಾಖೆ ಪ್ರಸ್ತಾಪಿಸಿತ್ತು. ಅಡಿಕೆಯಪ್ಪ ಚಾರಿಟಬಲ್ ಟ್ರಸ್ಟ್ ಗೆ ಜಮೀನು ನೀಡಲಾಗಿತ್ತು. ಕೆಲವು ಸಂಸ್ಥೆಗಳಿಗೆ ಭೂಮಿ ನೀಡಲಾಗಿತ್ತು. ಈ ಭೂಮಿ ವಾಪಸ್ ವಿಚಾರ ಮುಂದೂಡಿಕೆಯನ್ನು ಮಾಡಲಾಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಟ್ಟಿಲ್ಲ ಎಂದರು.

ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯಿಸಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯ ಆಗಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ. ಉದ್ಯೋಗ ಮಾಡುವ ಮಹಿಳೆಯರಿಗೆ ಅನುಕೂಲ ಆಗಲಿದೆ. ವೇತನ ಸಹಿತ ಒಂದು ದಿನದ ರಜೆ ಸಿಗಲಿದೆ ಎಂದರು.

ಪೊಲೀಸ್ ಗಣಕ ವಿಭಾಗಕ್ಕೆ ಉಪಕರಣ ಖರೀದಿ. ಕಂಪ್ಯೂಟರ್, ದತ್ತಾಂಶ, ಆ್ಯಪ್ ಖರೀದಿಗೆ 89.22 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ 11 ಶ್ರಮಿಕ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕೆ 405 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿಗೆ ಒಪ್ಪಿಗೆ ನೀಡಲಾಗಿದೆ. ಸೇತುವೆಗಳ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತಿದೆ. 2000 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ. 39 ಬೃಹತ್ ಸೇತುವೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 1000 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ಔರಾದ್ ಪ.ಪಂ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ನಾಗಸಂದ್ರದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ 26 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದರು.

ಮಂಗಳೂರಿನ ದೇರೆಬೈಲ್ ನ 3280 ಎಕರೆ ಭೂಮಿ ಟೆಕ್ ಪಾರ್ಕ್ ನಿರ್ಮಾಣ. ಪಿಪಿಎ ಮಾದರಿಯಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತದೆ. 30 ವರ್ಷಗಳ ಆಧಾರದ‌ಮೇಲೆ ಯೋಜನೆಗೆ 135 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದರು.

ತಾತಗುಣಿ ರೋರಿಚ್ ಎಸ್ಟೇಟ್ ಅಭಿವೃದ್ಧಿಗೊಳಿಸಲಾಗುತ್ತದೆ. ಪ್ರವಾಸೋಧ್ಯಮ ತಾಣವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಿದೆ. 99 ಕೋಟಿ ಅನುದಾನಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್ ವಿತರಣೆ ಮಾಡಲಾಗುತ್ತದೆ. 61.19 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. 2ಕೆಜಿ ತೊಗರಿಬೇಳೆ, ಎಣ್ಸೆ, ಉಪ್ಪು, ಸಕ್ಕರೆ ಇರಲಿದೆ. 10 ಕೆಜಿ ಅಕ್ಕಿಯಲ್ಲಿ 5 ಅಕ್ಕಿ ಕಡಿತಗೊಳಿಸಲಾಗುತ್ತದೆ. 5 ಕೆಜಿ ಅಕ್ಕಿ ಬದಲು ಇತರ ವಸ್ತುಗಳ ನೀಡಲಾಗುತ್ತದೆ. ಅಕ್ಕಿ ದುರುಪಯೋಗ‌ ಆಗ್ತಿದೆ ಎಂಬ ಆರೋಪದ ಕಾರಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಹಲವು ಕಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಾಗ ಮಾಡಲಾಗುತ್ತಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಣ್ಣಿಗೇರಿ ಪುರಸಭೆಯಲ್ಲಿ 1668 ಚ.ಮೀ ಅಪ್ಜಲಪುರ ಪುರಸಭೆ ವ್ಯಾಪ್ತಿ 1120 ಚ.ಮೀ, ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ 1287 ಚ.ಮೀ, ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200 ಚ.ಮೀ, ನಾಲ್ಕು ಕಡೆ ಭೂಮಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM1 Min Read

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM2 Mins Read

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM2 Mins Read
Recent News

BIG BREAKING: ಬಾಲಿವುಡ್ ಖ್ಯಾತ ಗಾಯಕಿ, ನಟಿ ಸುಲಕ್ಷಣ ಪಂಡಿತ್ ವಿಧಿವಶ | Sulakshana Pandit No More

06/11/2025 10:59 PM

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

06/11/2025 10:13 PM

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM
State News
KARNATAKA

ಮಂಡ್ಯದಲ್ಲಿ 5,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

By kannadanewsnow0906/11/2025 10:13 PM KARNATAKA 1 Min Read

ಮಂಡ್ಯ : ಆರೋಪಿಯೊಬ್ಬನಿಂದ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ…

ಮೈಸೂರು ನಗರ ಸಾರಿಗೆಯಲ್ಲಿನ ಧ್ವನಿ ಸ್ಪಂದನ ಯೋಜನೆಗೆ ‘KSRTC’ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025’

06/11/2025 9:36 PM

ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

06/11/2025 9:30 PM

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

06/11/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.