ಬೆಂಗಳೂರು : ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2024 ರಂದು ಮುಕ್ತಾಯವಾಗುತ್ತದೆ. ದಿನಾಂಕ: 14.04.2024 ರಂದು ಡಾ| ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಈ ಕಛೇರಿಯ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ತಿಳಿಸಲಾಗಿದೆ.
ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ದಿನಾಂಕ: 14.04.2024ರ ಭಾನುವಾರದಂದು ಡಾ| ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ 2024 ರ ಮಾದರಿ ನೀತಿ ಸಂಹಿತೆಯನ್ವಯ, ಪ್ರತಿ ವರ್ಷದಂತೆ ನಿಯಮಾನುಸಾರ ಆಚರಿಸಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಈ ಮೂಲಕ ಮತ್ತೊಮ್ಮೆ ತಿಳಿಸಿದೆ.