ಬೆಂಗಳೂರು: ರಾಜ್ಯ ಸರ್ಕಾರದಿಂದ 500ಕ್ಕೂ ಹೆಚ್ಚು ಕೆಎಎಸ್ ಹುದ್ದೆಗಳ ( KAS Jops ) ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದೀಗ ಕೆಪಿಎಸ್ಸಿಯಿಂದ 384 KAS ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ರ ಇಂದು ಕೊನೆಯ ದಿನವಾಗಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಂದಹಾಗೇ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 5 ಬಾರಿ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 7 ಬಾರಿ. ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಪ್ರಯತ್ನಗಳ ಯಾವುದೇ ಮಿತಿ ಇರುವುದಿಲ್ಲ.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಕೆಎಎಸ್ ಹುದ್ದೆಗಳ ನೇಮಕಾತಿಯ ಪರಿಷ್ಕೃತ ದಿನಾಂಕಗಳು
384 ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-04-2024
384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ದಿನಾಂಕ : 07-07-2024