ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂ.3ರ ಇಂದು ಕೊನೆಯ ದಿನ.
2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 28ರಂದು ಕೊನೆ ದಿನ ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ದಿನ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರಿಂದ ಜೂ.3ರವರೆಗೆ ವಿಸ್ತರಣೆ ಮಾಡಲಾಗಿದೆ.
2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 28-05-2024ರ ತನಕ ದಿನಾಂಕ ನಿಗದಿಪಡಿಸಲಾಗಿತ್ತು. ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಆದೇಶ ಹೇಳಿದೆ.