ಬೆಂಗಳೂರು: ಏ.29 ರಿಂದ ಮೇ 16 ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ನೋಂದಣಿ ಮಾಡಿಕೊಳ್ಳಲು ಏ.16 ರಂದು ಕೊನೆ ದಿನಾಂಕ ನಿಗದಿಪಡಿಸಲಾಗಿತ್ತು. ಇನ್ನೂ ಅಧಿಕ ವಿದ್ಯಾರ್ಥಿಗಳು ನೋಂದಣಿಯಾಗದೇ ಇರುವ ಕಾರಣ, ಏ.18 ರ ಸಂಜೆಯ ವರೆಗೆ ನೋಂದಾಯಿಸಿಕೊಳ್ಳಲು ಅವಧಿಯನ್ನು ವಿಸ್ತರಿಸಲಾಗಿದೆ .

ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಅನುತ್ತೀರ್ಣರಾದವರು ನೋಂದಾಯಿಸಿಕೊಳ್ಳಬಹುದಾಗಿದೆ.

2024ರ ಪರೀಕ್ಷೆ-1ರಲ್ಲಿ ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗದೇ ಇರುವ ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆ-2ಕ್ಕೆ ನೇರವಾಗಿ ಖಾಸಗಿ ಅಭ್ಯರ್ಥಿಯಾಗಿ ಕಲಾ ಅಥವಾ ವಾಣಿಜ್ಯ ವಿಭಾಗಗಳಿಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅವಳಿ ಜಿಲ್ಲೆಗಳ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಖುದ್ದಾಗಿ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು, ಗೈರು ಹಾಜರಾದ ವಿದ್ಯಾರ್ಥಿಗಳು ಮತ್ತು ಪರೀಕ್ಷೆ-1ರಲ್ಲಿ ಗಳಿಸಿದ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version