ಶಿವಮೊಗ್ಗ: ಜಿಲ್ಲೆಯ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ನಗರದಲ್ಲಿ 1ನೇ ತರಗತಿಯಿಂದ ಪಿಯುಸಿಯವರೆಗೆ ರಜೆಯನ್ನು ಘೋಷಿಸಲಾಗಿದೆ.
ಈ ಕುರಿತಂತೆ ಶಿವಮೊಗ್ಗ ಬಿಇಒ ರಮೇಶ್ ಅವರು ಆದೇಶಿಸಿದ್ದು, ನಾಳೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನಲೆಯಲ್ಲಿ 1ರಿಂದ 10ನೇ ತರಗತಿವರೆಗೆ ರಜೆ ನೀಡಲಾಗಿದೆ ಎಂದಿದ್ದಾರೆ.
ಇನ್ನೂ ಶಿವಮೊಗ್ಗ ನಗರದ ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಿ ಪಿಯು ಡಿಡಿ ಚಂದ್ರಪ್ಪ ಆದೇಶಿಸಿದ್ದಾರೆ.