ಬೆಂಗಳೂರು: ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ 8 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿರೋದಾಗಿ ಹೇಳಲಾಗುತ್ತಿದೆ. ಹಾಗಾದ್ರೆ ಯಾರ ಬಳಿ ಎಷ್ಟು ಆದಾಯಕ್ಕಿಂತ ಹೆಚ್ಚಿನ ಚರ-ಸ್ಥಿರಾಸ್ಥಿ ಪತ್ತೆಯಾಗಿದೆ ಎನ್ನುವ ಮಾಹಿತಿ ಮುಂದಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-3, ಮೈಸೂರು-1, ತುಮಕೂರು-1, ಕಲಬುರಗಿ-1, ಕೊಪ್ಪಳ-1 ಮತ್ತು ಕೊಡಗು-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ.
ಈ ದಿನ ದಿನಾಂಕ: 23.07.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 41 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ.
1) ಹೆಚ್. ವಿ ಯರಪ್ಪ ರೆಡ್ಡಿ, ಕಾರ್ಯಪಾಲಕ ಅಭಿಯಂತರರು, ಸಿ. ವಿ. ರಾಮನ್ ನಗರ ವಿಭಾಗ, ಬಿಬಿಎಂಪಿ, ಬೆಂಗಳೂರು.
ಆರೋಪಿದ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು ಮೂರು ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡು ಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,45,71,500/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 93,200/- ನಗದು, ರೂ. 94,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 22,00,000/- ಬೆಲೆ ಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,16,93,200/-
(ಇ) ಒಟು ಆಸ್ತಿ ಮೌಲ್ಯ- ರೂ. 2,62,64,700/-
2) ಡಾ|| ವಸಂತಿ ಅಮ ಬಿ. ವಿ, ಐ.ಎ.ಎಸ್, ವಿಶೇಷ ಉಪ ಆಯುಕ್ತರು, ರೈಲ್ ಇನ್‌ಫ್ರಾಸ್ಟಕ್ಟರ್ ಡೆವೆಲೆಪ್‌ಮೆಂಟ್ ಕಂಪನಿ(ಕರ್ನಾಟಕ) ಅಮಿಟೆಡ್, ಬೆಂಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 4 ವಾಸದ ಮನೆಗಳು, 3 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 7,40,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 66,390/- ನಗದು, ರೂ. 12,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 90,00,000/- ಬೆಲೆ ಬಾಳುವ ವಾಹನಗಳು, ರೂ 60,00,000/- ಬೆಲೆಬಾಳುವ ಇತರೆ ವಸ್ತುಗಳು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,62,66,390/-
(ಇ) ಒಟು ಆಸ್ತಿ ಮೌಲ್ಯ- ರೂ. 9,02,66,390/-
3) ಮಗ್ಗಿ ಮಾರುತಿ, ಸಹಾಯಕ ನಿರ್ದೇಸಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಎಂ. ಎಸ್. ಬಿಲ್ಡಿಂಗ್, ಬೆಂಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 10 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 8 ನಿವೇಶನ, 5 ವಾಸದ ಮನೆಗಳು, 19 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 4,85,26,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,30,000/- DR, Lo 77,76,850/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 42,00,000/- ಬೆಲೆ ಬಾಳುವ ವಾಹನಗಳು, ರೂ. 10,00,000/- ಬ್ಯಾಂಕ್ ಬ್ಯಾಲೆನ್ಸ್, ರೂ. 18,39,600/- ಬೆಲೆಬಾಳುವ ಇತರೆ ಗೃಹೋಪಯೋಗಿ ವಸ್ತುಗಳು ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,49,46,450/- (ಇ) ಒಟು ಆಸ್ತಿ ಮೌಲ್ಯ- ರೂ 6,34,72,450/-
4) ವೆಂಕಟರಾಮ ಬಿ, ಕಛೇರಿ ಸಹಾಯಕ(ಆಡಳಿತ), ಎಂ.ಸಿ.ಸಿ, ಮೈಸೂರು ಪ್ರಭಾರ: ಎ.ಸಿ. ವಲಯ-5, ಎಂ.ಸಿ.ಸಿ, ಮೈಸೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ವಾಸದ ಮನೆಗಳು, 2 ಎಕರೆ 2 ಗುಂಟೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 2,56,25,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 2,01,300/- BRD, Lo 37,00,100/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 43,60,000/- ಬೆಲೆಬಾಳುವ ವಾಹನಗಳು ಮತ್ತು ರೂ. 32,72,738/- ಇತರೆ ಮತ್ತು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,15,34,138/-
(ಇ) ಒಟು ಆಸ್ತಿ ಮೌಲ್ಯ- ರೂ 3,71,59,138/-
5) ರಾಜೇಶ್ ಎಂ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕೆ.ಐ.ಎ.ಡಿ.ಬಿ, ತುಮಕೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 2 ವಾಸದ ಮನೆಗಳು, 5 ಎಕರೆ 6 ಗುಂಟೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 2,10,12,600/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 6,46,590/- ನಗದು, ರೂ 85,04,182/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 18,09,931/- ಬೆಲೆಬಾಳುವ ವಾಹನಗಳು, ರೂ. 48,00,000/- ಬೆಲೆಬಾಳುವ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಖರ್ಚುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,57,60,703/-
(ಇ) ಒಟು ಆಸ್ತಿ ಮೌಲ್ಯ- ರೂ 3,67,73,303/-
6) ಸುನೀಲ್ ಕುಮಾರ್, ಕಾರ್ಯಪಾಲಕ ಅಭಿಯಂತರರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರಗಿ
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 1 ವಾಸದ ಮನೆ, 5 ಎಕರೆ 35 ಗುಂಟೆ ಕೃಷಿ ಜಮೀನು, ಎಲ್ಲಾ ಸೇರಿ wwe do. 1,90,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 15,75,660/- ನಗದು, ರೂ. 1,26,60,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 12,50,000/- ಬೆಲೆಬಾಳುವ ವಾಹನಗಳು, ರೂ. 89,38,237/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ
2,44,23,897/-
(ಇ) ಒಟು ಆಸ್ತಿ ಮೌಲ್ಯ- ರೂ 4,34,23,897/-
7) ಶೇಖು ಚೌವ್ಹಾಣ್, ಉಪ-ನಿರ್ದೇಶಕರು, ಜಿಲ್ಲಾ ಕೈಕಾರಿಕಾ ಕೇಂದ್ರ, ಕೊಪ್ಪಳ ಜಿಲ್ಲೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 13 ನಿವೇಶನಗಳು, 3 ವಾಸದ ಮನೆಗಳು, 7 ಎಕರೆ 28 ಗುಂಟೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,64,44,000/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 52,49,500/- ನಗದು, ರೂ 61,11,458/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 12,00,000/- ಬೆಲೆಬಾಳುವ ವಾಹನಗಳು, ರೂ. 12,49,266/- ಬ್ಯಾಂಕ್ ಬ್ಯಾಲೆನ್ಸ್, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ1,47,10,224/-
(ಇ) ಒಟು ಆಸ್ತಿ ಮೌಲ್ಯ- ರೂ 3,11,54,224/-
8) ಮಂಜುನಾಥಸ್ವಾಮಿ, ಎಂ, ಜಂಟಿ ನಿರ್ದೇಶಕರು(ಪ್ರಭಾರ), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 2 ವಾಸದ ಮನೆಗಳು, 4 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 4,45,07,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 2,27,100/- ನಗದು, ರೂ 46,04,800/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 17,00,000/- ಬೆಲೆಬಾಳುವ ವಾಹನಗಳು, ರೂ 10,00,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ.75,31,900/-
(ಇ) ಒಟು ಆಸ್ತಿ ಮೌಲ್ಯ- ರೂ 5,20,38,900/-
BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ