ಧಾರವಾಡ : ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಹಾಗೂ ಸ್ಟಿಲ್ ಉದ್ಯಮ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಜೂ.18ರ ಇಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅವರು ಮಧ್ಯಾಹ್ನ 1:30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 2:30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು. ಅಲ್ಲಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ಮಧ್ಯಾಹ್ನ 4 ಗಂಟೆಯವೆರೆಗೆ ಕೃಷಿ ವಿಶ್ವವಿದ್ಯಾಲಯ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು.

ಸಂಜೆ 4 ಗಂಟೆಗೆ ಕೃಷಿ ವಿಶ್ವವಿದ್ಯಾಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಿ, ಸಂಜೆ 7 ಗಂಟೆಗೆ
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version