ಗುಜರಾತ್ : ಕಳೆದ 24 ಗಂಟೆಗಳಲ್ಲಿ ಗುಜರಾತ್ನಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರವಾಹದಂತಹ ಪರಿಸ್ಥಿತಿಯಿಂದ ಸಾವಿರಾರು ಜನರು ಸಮಸ್ಯೆಗೆ ಒಳಗಾಗಿದ್ದಾರೆ . ಅಹ್ಮದಾಬಾದ್ ಮತ್ತು ರಾಜ್ಕೋಟ್ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಯುಂಟಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 83 ಜನರು ಸಾವನ್ನಪ್ಪಿದ್ದಾರೆ. ಒಟ್ಟು 31,000 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF ) ತಂಡಗಳ 18 ತುಕಡಿಗಳನ್ನು ಅಗತ್ಯವಿದ್ದಾಗ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗಾಗಿ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.
Gujarat | With roads & bylanes submerged and rainwater inundating residential premises alike, the flood situation in Navsari district remains grim pic.twitter.com/7rymDUoj9u
— ANI (@ANI) July 13, 2022
ಭಾರೀ ಮಳೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಗೆ ಕಾರಣವಾದ ಕಾರಣ ಜುಲೈ 16 ರವರೆಗೆ ಗುಜರಾತ್ನಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಕೋಟ್ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ರಸ್ತೆಗಳು ಮುಳುಗಡೆಯಾಗಿರುವುದರಿಂದ ಮತ್ತು ಮಳೆನೀರು ವಸತಿ ಪ್ರದೇಶಗಳು ಸಂಪೂರ್ಣವಾಗಿ ಮುಳುಗಿದೆ. ನವಸಾರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ.
ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಿಎಂ
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮಂಗಳವಾರ ನವಸಾರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಗುಜರಾತ್ಗೆ ಭರವಸೆ ನೀಡಿದರು.