ಬೆಂಗಳೂರು: ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಆಗಮಿಸುತ್ತಿದ್ದಾರೆ. ಇದೀಗ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬಳಿಕ, ಟಾಲಿವುಟ್ ನಟ ಜೂನಿಯರ್ ಎನ್ ಟಿ ಆರ್ ಆಗಮಿಸಿದ್ದಾರೆ. ಅವರನ್ನು ಸಚಿವ ಮುನಿರತ್ನ ಹಾಗೂ ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.
ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಒಂದು ವರ್ಷವೇ ಕಳೆದಿದೆ. ಈ ಸಂದರ್ಭದಲ್ಲಿ ಇಂದು ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರದಿಂದ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಸಮಾರಂಭವನ್ನು ಏರ್ಪಡಿಸಲಾಗಿದೆ.
ಇಂದಿನ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಅವರನ್ನು ಆಹ್ವಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ ಬಳಿ, ಈಗ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ನಟ ಜೂ.ಎನ್ ಟಿ ಆರ್ ಆಗಮಿಸಿದರು. ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಸಚಿವ ಮುನಿರತ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಲ್ಲಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ವಿಶ್ರಾಂತಿ ಪಡೆಯಲು ತೆರಳಲಿದ್ದಾರೆ. ಅಲ್ಲಿಂದ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ನಡೆಯುವಂತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಆಗಮಿಸಲಿದ್ದಾರೆ.
ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ – CM ಬಸವರಾಜ ಬೊಮ್ಮಾಯಿ