ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದಿದೆ.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದೆ.
ಈ ರೀತಿ SSLC ಪರೀಕ್ಷೆ-3ರರ ಫಲಿತಾಂಶ ಚೆಕ್ ಮಾಡಿ
https://karresults.nic.in ಜಾಲತಾಣದಲ್ಲಿ ಇಂದು ದಿನಾಂಕ:26.08.2024 ರಂದು ಮಧ್ಯಾಹ್ನ 12.00 ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು