ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ : ನಾಳೆಯೇ ಸಿಎಂ ಬಿಎಸ್ ವೈ ದೆಹಲಿಗೆ ಪ್ರಯಾಣ – Kannada News Now


State

ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ : ನಾಳೆಯೇ ಸಿಎಂ ಬಿಎಸ್ ವೈ ದೆಹಲಿಗೆ ಪ್ರಯಾಣ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರುಉ ದಿಢೀರ್ ದೆಹಲಿಗೆ ತೆರಳುತ್ತಿದ್ದು, ನಾಳೆ ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ  ಕಲಬುರ್ಗಿಯಿಂದ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.

ನಾಳೆ ಸಂಜೆ ದೆಹಲಿ ತಲುಪಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

BIG NEWS : ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್!

ಇನ್ನು ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಾಗುತ್ತಿರುವುದರಿಂದ ಮಳೆಗಾಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆಗೆ ಅವಕಾಶವನ್ನು ಸಿಎಂ ಕೇಳಲಿದ್ದಾರೆ. ಜೊತೆಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ಜಿಎಸ್ ಟಿ ಬಾಕಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.