ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನಾಳೆ ಬಿಗ್ ಡೇ ಆಗಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಜಾಮೀನು ರದ್ದು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆದು, ತೀರ್ಪು ಹೊರ ಬೀಳು ಸಾಧ್ಯತೆ ಇದೆ.
ಹೌದು ನಾಳೆ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಪರವಾದಂತ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಲಿದೆ. ನ್ಯಾಯಮೂರ್ತಿ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ಮುಂದುವರೆಸಲಿದೆ. ನಾಳೆ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಆಲಿಸಲಿದ್ದು, ಆ ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಅಂದಹಾಗೇ ನಟ ದರ್ಶನ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದರೇ, ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆಯ ಪರವಾಗಿ ಹಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಲಿದ್ದಾರೆ. ಮಂಗಳವಾರದ ನಾಳೆ ಸಿಬಲ್ ವಾದ ಮಂಡನೆಯ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.
ಸಾಗರ ನಗರದಲ್ಲಿ ‘ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ’ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ