ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಹೀಗಾಗಿ ಮದ್ದೂರಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ನಾಳೆ ಮದ್ದೂರು ತಾಲ್ಲೂಕಿನಲ್ಲಿ ಬಂದ್ ಗೆ ಹಿಂದೂ ಮುಖಂಡರು ಕರೆ ನೀಡಿದ್ದಾರೆ.
ನಾಳೆ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಖಂಡಿಸಿ, ಹಿಂದೂ ಮುಖಂಡರು ಮದ್ದೂರು ಬಂದ್ ಗೆ ಕರೆ ನೀಡಿದ್ದಾರೆ. ಅಲ್ಲದೇ ಬುಧವಾರ ಮದ್ದೂರು ತಾಲ್ಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣದಲ್ಲಿ ತಂದು ಮರೆವಣಿಗೆ ಮಾಡಿ ವಿಸರ್ಜನೆ ಮಾಡಲು ತೀರ್ಮಾನಿಸಲಾಗಿದೆ.
ಮದ್ದೂರಲ್ಲಿ ಡಿಜೆ ಸಮೇತ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ನಡೆಸಲು ಹಿಂದೂ ಮುಖಂಡರು ಕರೆ ನೀಡಿದ್ದಾರೆ. ಹೀಗಾಗಿ ಮದ್ದೂರು ತಾಲ್ಲೂಕಿನಲ್ಲಿ ಮತ್ತಷ್ಟು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.