ಬೆಂಗಳೂರು: ದೇಶದ ಮೊದಲ ಕ್ವಾಂಟಮ್ ಸಮ್ಮೇಳನಕ್ಕೆ ಆಗಮಿಸುತ್ತಿರುವ ನೊಬೆಲ್ ಪುರಸ್ಕೃತ ವಿಜ್ಞಾನಿಗಳಾದ ಪ್ರೊ. ಡಂಕನ್ ಹಲ್ದಾನೆ (Prof. Duncan Haldane – 2016 Noble Lauteate) ಹಾಗೂ ಪ್ರೊ. ಡೇವಿಡ್ ಗ್ರಾಸ್ (Prof. David Gross – 2004 Nobel Laureate) ಅವರೊಂದಿಗೆ ಜುಲೈ 30 ರಂದು ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ನಡೆಸಿ ಮಾತನಾಡಿದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ನಮ್ಮ ಸರ್ಕಾರವು ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ರಾಜ್ಯವನ್ನಾಗಿ ರೂಪಿಸುವಲ್ಲಿ ಬದ್ಧವಾಗಿದೆ. ಈ ಸಂಬಂಧ ಕರ್ನಾಟಕವನ್ನು ಕ್ವಾಂಟಮ್ ರಾಜಧಾನಿಯನ್ನಾಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ರೂಪುರೇಷಗಳನ್ನು ಸಿದ್ದಪಡಿಸಲು ನಮ್ಮ ಸರ್ಕಾರ ಮುಂದಡಿ ಇಟ್ಟಿದೆ. ಐಟಿ, ಏರೋಸ್ಪೇಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುಂತೆ ಕ್ವಾಂಟಮ್ ಕ್ಷೇತ್ರದಲ್ಲೂ ನಮ್ಮ ರಾಜ್ಯದ ಛಾಪು ಮೂಡಿಸುವ ಸಲುವಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಕ್ವಾಂಟಮ್ ತಂತ್ರಜ್ಞಾನ ತನ್ನ ಛಾಪನ್ನು ಮೂಡಿಸಿ, ಆರ್ಥಿಕ, ಸಾಮಾಜಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಬೆಂಗಳೂರು ಭಾರತದ ನಾವಿನ್ಯತೆಯ ರಾಜಧಾನಿಯಾಗಿರುವ ಜೊತೆಗೇ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಪೂರಕ ಸೌಕರ್ಯಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಜುಲೈ 31 ಹಾಗೂ ಆಗಸ್ಟ್ 1 ರಂದು ಎರಡು ದಿನಗಳ ಕಾಲ “ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ” ವನ್ನು ಆಯೋಜಿಸಲಾಗಿದೆ ಎಂದರು.
ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಆಯೋಜಿಸಲಾಗುತ್ತಿರುವ ಈ ಸಮ್ಮೇಳನದಲ್ಲಿ ಕ್ವಾಂಟಮ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವಂತ ನೊಬೆಲ್ ಪ್ರಶಸ್ತಿಗೆ ಭಾಜನರಾಗಿರವಂತಹ ಪ್ರೊ. ಡಂಕನ್ ಹಲ್ದಾನೆ (Prof. Duncan Haldane – 2016 Noble Laureate) ಹಾಗೂ ಪ್ರೊ. ಡೇವಿಡ್ ಗ್ರಾಸ್ (Prof. David Gross – 2004 Nobel Laureate) ಭಾಗವಹಿಸಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಸಭೆಯಲ್ಲಿ ಕ್ವಾಂಟಮ್ ಕ್ಷೇತ್ರದ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಸಭೆಯಲ್ಲಿ ಕೆಸ್ಟೆಪ್ಸ್ ನಿರ್ದೇಶಕರಾದ ಸದಾಶಿವ ಪ್ರಭು, ಕ್ವಾಂಟಮ್ ಸಮ್ಮೇಳನದ ಸಹಸಂಚಾಲಕರಾದ ಐಐಎಸ್‌ಸಿ ಪ್ರೊ. ಅಕ್ಷಯ್ ನಾಯ್ಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಬೆಂಗಳೂರಲ್ಲಿ ಉಗ್ರರ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕಿತ ಮಹಿಳೆ ಪೊಲೀಸರು ಅರೆಸ್ಟ್