ಶಿವಮೊಗ್ಗ: ನಾಳೆ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ನಾಳೆ ಬೆಳಗ್ಗೆ 11 ಘಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ.
ನಾಳೆಯ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗೀಯ ಅಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂಬುದಾಗಿ ಹೇಳಿದೆ.
ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ ಕೃಷ್ಣಮೂರ್ತಿ, ಕೋಶಾಧ್ಯಕ್ಷರಾದಂತ ನಾಗೇಂದ್ರ ಎಸ್ ಕುಮಟ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂಬುದಾಗಿ ತಿಳಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು








