ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ.
ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಾದ್ಯಂತ ಅಮೃತ ಭಾರತ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಹೊಂದಿದ 103 ರೈಲ್ವೆ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮವನ್ನು ಏಕಕಾಲಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸುವ ಕಾರ್ಯಕ್ರಮವದಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕದ ಬಾಗಲಕೋಟೆ ಮುನಿರಾಬಾದ್ ಗೋಕಾಕ್ ಗದಗ್ ಧಾರವಾಡ ರೈಲ್ವೆ ನಿಲ್ದಾಣಗಳು ಸಹ ಇದರಲ್ಲಿ ಸೇರಿವೆ. ಸೋಮಣ್ಣ ರವರು ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಬಳಿಕ ಮಧ್ಯಾಹ್ನ 2 ಗಂಟೆಗೆ ತೇಜಸ್ ಇಂಟರ್ನ್ಯಾಷನಲ್ ಎಜುಕೇಶನಲ್ ಇನ್ಸ್ಟಿಟ್ಯೂಷನ್ ನಲ್ಲಿ ನೂತನ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.