ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆಗಳನ್ನೊಳಗೊಂಡ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯಾನವನಗಳು ಬೆಂಗಳೂರಿನ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. “ಉದ್ಯಾನ ನಗರಿ” ಯಲ್ಲಿ ಪಾಲಿಕೆಯು 1,287 ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡಲಾಗುತ್ತಿದೆ. ಉದ್ಯಾನವನಗಳಿಗೆ ವೀಕ್ಷಿಸಲು ಬರುವಂತಹ ಸಾರ್ವಜನಿಕರಿಗೆ ಮತ್ತು ವಾಯುವಿಹಾರಿಗಳಿಗೆ ಅನುಕೂಲವಾಗಲೆಂದು ಉದ್ಯಾನವನಗಳಲ್ಲಿ “ಬೆಂಗಳೂರು ಹಬ್ಬ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. … Continue reading ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ