ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ‍್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-01 ಡಿ.ಎನ್.ಹಳ್ಳಿ ಎನ್‌ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು.
ಎಫ್-03 ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಸೋಲಾರ್ ಮಾರ್ಗದ ಹಳೆ ರ‍್ರಗುಡಿ, ಹೊಸ ರ‍್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು ಮತ್ತು ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.19 ರಂದು ಬೆಳಿಗ್ಗೆ 09 ರಿಂದ 05 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಅವಂಬಾವಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.20 ರಂದು ಬಳ್ಳಾರಿ ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎನ್‌ಹೆಚ್‌ಎಐ ವತಿಯಿಂದ ರಸ್ತೆ ಅಗಲೀಕರಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಆ.20 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಮಾರ್ಗಗಳಾದ ಎಫ್-43 ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday
ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ECG ವ್ಯವಸ್ಥೆ