. ಕೇಂದ್ರ ಸರ್ಕಾರ ಎಲ್ ಪಿಜಿ ಸಿಲಿಂಡರ್ ದರಗಳನ್ನು ಹೆಚ್ಚಿಸಿದೆ. ಇವೂ ಸೇರಿದಂತೆ ದಿನದ 10 ಟಾಪ್ ಸುದ್ದಿಗಳು ನಿಮಗಾಗಿ ಇಲ್ಲಿದೆ
ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ..!
ನವದೆಹಲಿ: ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೆ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 50 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ.
“ಪಿಎಂಯುವೈ ಫಲಾನುಭವಿಗಳಿಗೆ, ಬೆಲೆ ಪ್ರತಿ ಸಿಲಿಂಡರ್ಗೆ 500 ರೂ.ಗಳಿಂದ 550 ರೂ.ಗೆ ಏರಲಿದೆ. ಇತರ ಗ್ರಾಹಕರಿಗೆ ಇದು 803 ರೂ.ಗಳಿಂದ 853 ರೂ.ಗೆ ಹೆಚ್ಚಾಗುತ್ತದೆ ಎಂದು ಪುರಿ ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಪ್ರತಿ ಲೀಟರ್ಗೆ ತಲಾ 2 ರೂ.ಗಳಷ್ಟು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಸುಂಕಗಳ ಹೆಚ್ಚಳವು “ಏಪ್ರಿಲ್ 8, 2025 ರಿಂದ ಜಾರಿಗೆ ಬರಲಿದೆ” ಎಂದು ಅದು ಹೇಳಿದೆ.
ಪಿಕಾಸಿ ಹಿಡಿದು, ಮಣ್ಣು ಅಗೆದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ
ಸಾರ್ವಜನಿಕವಾಗಿರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗಬೇಕು. ಎಲ್ಲರಲ್ಲೂ ನಮ್ಮ ಊರು, ನಮ್ಮ ಶಾಲೆ ಎಂಬ ಅಭಿಮಾನವಿರಬೇಕು. ಮಕ್ಕಳ ಭವಿಷ್ಯ ರೂಪಿಸುವುದು ಮಾತ್ರವಲ್ಲ ಸರ್ಕಾರದ ಅಸ್ತಿಯ ರಕ್ಷಣೆಯ ಹೊಣೆಯೂ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. “ ಸಚಿವ ಎಸ್. ಮಧು ಬಂಗಾರಪ್ಪ ಅವರೇ ಸ್ವತಃ ಗುದ್ದಲಿ, ಪಿಕಾಸಿ ಹಿಡಿದು, ಗುಂಡಿ ತೆಗೆದು, ಅಕ್ಷರಷಃ ತಲೆಯ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಶ್ರಮದಾನ ಮಾಡಿದ್ದು, ಎಲ್ಲರಿಗೂ ಪ್ರೇರಣೆಯಾಗಿತ್ತು.
ಆರೇ ತಿಂಗಳಲ್ಲಿ ದುಡ್ಡು ವಾಪಸ್ಸು ಕೊಡ್ತೀನಿ ಅಂಥ 2.45 ಲಕ್ಷ ರೂ. ಕದ್ದು ಪತ್ರ ಬರೆದಿಟ್ಟು ಹೋದ ಕಳ್ಳ!
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಅಂಗಡಿಯೊಂದರಿಂದ 2.45 ಲಕ್ಷ ರೂ.ಗಳನ್ನು ಕದ್ದ ವ್ಯಕ್ತಿಯೊಬ್ಬ ರಾಮನವಮಿಯಂದು ಮಾಡಿದ ಕೃತ್ಯಕ್ಕೆ ಕ್ಷಮೆ ಕೋರಿ ಪತ್ರವನ್ನು ಬಿಟ್ಟು ಹೋಗಿರುವ ಘಟನೆ ನಡೆದಿದೆ ರಾಮನವಮಿಯಂದು ಮಾಡಿದ ಕೃತ್ಯಕ್ಕೆ ಕ್ಷಮೆ ಕೋರಿದ್ದಾನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದು ಖಾನ್ ಹೇಳಿದ್ದಾರೆ.ಇದೇ ವೇಳೇ ಪತ್ರದಲ್ಲಿ ಕಳ್ಳ. ಆರು ತಿಂಗಳಲ್ಲಿ ಮರುಪಾವತಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಮತ್ತು ಅಂಗಡಿ ಮಾಲೀಕರು ಅವರನ್ನು ಪೊಲೀಸರಿಗೆ ಹಸ್ತಾಂತರಿಸಲು ಮುಕ್ತರಾಗಿದ್ದಾರೆ ಎಂದು ಖಾನ್ ಮಾಹಿತಿ ನೀಡಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ ಎನ್ನಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗೋ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ.
ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧ ಹೇರಿದ ಸೌದಿ ಅರೇಬಿಯಾ
ನವದೆಹಲಿ: ಈ ವರ್ಷದ ಹಜ್ ಯಾತ್ರೆಗೆ ಮುಂಚಿತವಾಗಿ, ಸೌದಿ ಅರೇಬಿಯಾ (ಕೆಎಸ್ಎ) 14 ದೇಶಗಳ ನಾಗರಿಕರಿಗೆ ವೀಸಾ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಮುಕ್ತಾಯದ ದಿನವಾದ 2025ರ ಜೂನ್ ಮಧ್ಯದವರೆಗೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳ ವಿತರಣೆಯಿಂದ ಸರ್ಕಾರ ದೂರವಿರಲಿದೆ.
ಹಜ್ ತೀರ್ಥಯಾತ್ರೆಗೆ ಸಂಬಂಧಿಸಿದ ಜನದಟ್ಟಣೆಯನ್ನು ನಿರ್ವಹಿಸುವ ಪ್ರಯತ್ನಗಳ ಮಧ್ಯೆ ಮತ್ತು ಸರಿಯಾದ ನೋಂದಣಿ ಇಲ್ಲದೆ ವ್ಯಕ್ತಿಗಳು ಹಜ್ ಮಾಡಲು ಪ್ರಯತ್ನಿಸುವುದನ್ನು ತಡೆಯುವ ಪ್ರಯತ್ನಗಳ ಮಧ್ಯೆ ಈ ನಿಷೇಧ ಬಂದಿದೆ ಎಂದು ಸೌದಿ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಶಾಖ ಮತ್ತು ನೋಂದಣಿಯಾಗದ ಯಾತ್ರಾರ್ಥಿಗಳ ಒಳಹರಿವಿನಿಂದ ಉಂಟಾದ ಕಳೆದ ವರ್ಷದ ಹಜ್ ಕಾಲ್ತುಳಿತ ಪುನರಾವರ್ತನೆಯನ್ನು ತಪ್ಪಿಸುವ ಗುರಿಯನ್ನು ಈ ಕ್ರಮ ಹೊಂದಿದೆ.