ಚಿಕ್ಕಮಗಳೂರು : ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಎಲ್ಲೆಡೆ ಮಳೆ ಆರಂಭವಾಗಿದೆ. ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಚಿಕ್ಕಮಂಗಳೂರು ಮಡಿಕೇರಿ ಕೊಡಗು ಎಂದು ಆಗಮಿಸುತ್ತಾರೆ. ಅಲ್ಲದೆ ಕೆಲವರಿಗೆ ಸೆಲ್ಫಿ ಹುಚ್ಚು ಅತಿಯಾಗಿರುತ್ತದೆ. ಆದರೆ ಈ ವೇಳೆ ಅವರು ನಿರ್ಲಕ್ಷ ವಹಿಸಿ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಾರೆ. ಅಂತದ್ದೇ ಘಟನೆ ಇದೀಗ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಹೌದು ಇದೀಗ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಬ್ಬೆ ಫಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ.
ಹೈದರಾಬಾದ್ ಮೂಲದ ಪ್ರವಾಸಿಗ ಶ್ರವಣ್ (25) ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಹಬ್ಬೆ ಫಾಲ್ಸ್ ಗೆ ಹೈದರಾಬಾದ್ನ ಇಬ್ಬರು ಯುವಕರು ಬಂದಿದ್ದರು.ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಡಿಮೆ ಪ್ರಮಾಣದ ನೀರಿದ್ದ ಹಿನ್ನೆಲೆಯಲ್ಲಿ ಯುವಕನ ತಲೆ ಬಂಡೆಗೆ ಬಡಿದು ಸಾವನಪ್ಪಿದ್ದಾನೆ. ಲಿಂಗದಹಳ್ಳಿ ಪೊಲೀಸ್ ಹಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.