ಚಾಮರಾಜನಗರ : ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿತಗೊಂಡ ಹಿನ್ನೆಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಇಂದು, ನಾಳೆ 2 ದಿನ ಪ್ರವೇಶ ನಿರ್ಬಂಧಿಸಲಾಗಿದೆ.
ಜುಲೈ 29 ಹಾಗೂ 30 2 ದಿನ ದುರಸ್ತಿ ಕಾರ್ಯ ನಡೆಯುವ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಡಿಸಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಭಾರಿ ಮಳೆಗೆ ತಡೆಗೋಡೆ ಕುಸಿದಿದ್ದರಿಂದ ಕಲ್ಲುಗಳು ರಸ್ತೆಗೆ ಉರುಳಿ ಬಿದ್ದಿವೆ. ಹೀಗಾಗಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತರು ಮತ್ತು ಪ್ರವಾಸಿಗರ ಪ್ರವೇಶವನ್ನು ಇಂದಿನಿಂದ ಎರಡು ದಿನಗಳ ಕಾಲ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇಂದಿನಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲಿದ್ದಾರೆ. ಎರಡು ದಿನ ದುರಸ್ತಿ ಕಾರ್ಯ ನಡೆಯುವ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.