ಕೊಡಗು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ ಎಂದು ತಿಳಿಸಿದರು.
2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ
ವಿರಾಜಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಳಿಕ ಪಾಕಿಸ್ತಾನ ಪರ ಘೋಷಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆ, ಕಾಂಗ್ರೆಸ್ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತದೆ. ಅದು ಕನ್ನಡಿಗರ ಸರ್ಕಾರ ಆಗಿರೊಲ್ಲ, ಬದಲಾಗಿ ತಾಲಿಬಾನ್ ಸರ್ಕಾರ ಆಗಿರುತ್ತೆ ಅಂತಾ ಹೇಳಿದ್ದೆ ಎಂದರು.
ರಾಮನಗರ : ಹಣ ಡಬಲ್ ಆಗುತ್ತೆಂದು ಆಮಿಷ : ಯುವತಿಗೆ 12 ಲಕ್ಷ ದೋಖಾ ಮಾಡಿದ ವಂಚಕರು
ಇದೀಗ ನನ್ನ ಮಾತು ನಿಜವಾಗಿದೆ. ಮೊನ್ನೆ ವಿಧಾನಸೌಧದಲ್ಲಿ ಘೋಷಣೆ ಕೂಗಿರುವುದು ಕೇವಲ ಟ್ರಯಲರ್ ಅಷ್ಟೇ ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ, ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೇಳುತ್ತದೆ. ಕಾಂಗ್ರೆಸ್ ಸರ್ಕಾರ ಮುಂದುವರಿಯಲು ಬಿಟ್ಟರೆ ತಾಲಿಬಾನ್ ಸರ್ಕಾರ ಮಾಡುವ ಎಲ್ಲಾ ಅನಾಚಾರಗಳನ್ನು ಮಾಡುತ್ತದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.
BREAKING:ವಾಹನ ಸವಾರರ ಗಮನಕ್ಕೆ ‘ಫಾಸ್ಟ್ಟ್ಯಾಗ್’ KYC ಗಡುವನ್ನು ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲು NHAI ಚಿಂತನೆ
ರಾಜ್ಯಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋತಿರುವುದಕ್ಕೆ ಬಿಜೆಪಿ ಹೀಗೊಂದು ವಿವಾದ ಸೃಷ್ಟಿಸಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಆರೋಪಕ್ಕೆ ಉತ್ತರಿಸಿದ ಅವರು, ಇದು ಶುದ್ಧ ಸುಳ್ಳು. ದೇಶದಲ್ಲೇ ರಾಜ್ಯಸಭೆಯಲ್ಲಿ ಬಿಜೆಪಿ ಮೆಜಾರಿಟಿ ಪಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಮಾಧ್ಯಮಗಳು ಪ್ರಪಂಚಕ್ಕೆ ತೋರಿಸಿವೆ. ಕೂಗಿರುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿರುಗೇಟು ನೀಡಿದ