ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಸಚಿವ ಎಂ‌.ಬಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರಿಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. … Continue reading ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಸಚಿವ ಎಂ‌.ಬಿ.ಪಾಟೀಲ್