ಕಲಬುರ್ಗಿ : ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಇಒ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕ ಪಂಚಾಯತ್ ನಲ್ಲಿ ನಡೆದಿದೆ.
ಹೌದು ತಾಲೂಕು ಪಂಚಾಯತಿ ಇಒ ಮಹಾಂತೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, 20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗಿಬಿದ್ದಿದ್ದಾನೆ.
20 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಒ, ಮನ್ ರೇಗ ಕೆಲಸ ಆಕ್ಷನ್ ಪ್ಲಾನ್ ನೀಡಲು ತಾಲೂಕಿನ ಬಳ್ಳಿ ಗ್ರಾಮದ ನಬಿ ಲಾಲನಿಂದ ಲಂಚ ಸ್ವೀಕರಿಸುತ್ತಿದ್ದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ ಪಿ ಜಾನ್ ಆಂಟನಿ ನೇತ್ರತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.