ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ 103 ಚಾರಣಿಗ ರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ 103 ಜನರ ವಿರುದ್ಧ FIR ದಾಖಲಾಗಿದೆ.
ಹೌದು ವಿಶೇಷದಲ್ಲಿ ಬೆಂಗಳೂರು ಮೂಲದ 103 ಜನರು ಟ್ರಕ್ಕಿಂಗ್ ಗೆ ತೆರಳಿದ್ದರು. ಇದೀಗ ಪೊಲೀಸರು 103 ದಿನದ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದಾರೆ. ಅರಣ್ಯ ಪ್ರದೇಶಕ್ಕೆ ಪ್ರವಾಸಿಗರು ಟ್ರೇಕ್ಕಿಂಗ್ ಗೆ ತೆರಳಿದ್ದರು. ಸ್ಥಳೀಯರ 6ಪಿಕಪ್ ವಾಹನಗಳ ಮೇಲು ಕೂಡ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿ ದಂಡ ಹಾಕಿ ಪ್ರವಾಸಿಗರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮುಡಿಗೇರಿ ತಾಲೂಕಿನ ಬಿದರಿತಳ ಗ್ರಾಮದಲ್ಲಿ ಬೆಂಗಳೂರು ಮೂಲದ 103 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಟ್ರಕ್ಕಿಂಗ್ ಗೆ ಕರೆದೊಯ್ದಿದ್ದರು. ಎರಡು ಬಸ್ ಮೂರು ಪಿಕಪ್ ವಾಹನಗಳು ಸಹ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳು ಎಂದು ತಿಳಿದುಬಂದಿದೆ.ಟೂರಿಸ್ಟ್ ಪ್ಯಾಕೇಜ್ ಅಡಿ ಟೆಕ್ಕಿಗಳು ಪ್ರವಾಸಕ್ಕೆ ಬಂದಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.