ಹರ್ದೋಯಿ (ಉತ್ತರ ಪ್ರದೇಶ): 24 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಯು ಶನಿವಾರ ಹರ್ದೋಯ್ನ ಗರ್ರಾ ನದಿಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ಇನ್ನುಳಿದ ಹದಿನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮುಖೇಶ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, 24 ಜನರು ಟ್ರ್ಯಾಕ್ಟರ್ ಟ್ರಾಲಿ ಸಮೇತ ಗರ್ರಾ ನದಿಗೆ ಬಿದ್ದಿದ್ದಾರೆ. ಅವರಲ್ಲಿ 14 ಜನರು ಬದುಕುಳಿದಿದ್ದು, ಮುಖೇಶ್ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ. ನಾಪತ್ತೆಯಾದ ಐದು ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು Hardoi ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿರುವ ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ನಾಪತ್ತೆಯಾದವರ ಪತ್ತೆಗಾಗಿ ಇನ್ನೂ ಕಾರ್ಯಾಚರಣೆ ಮುಂದುವರೆಸಿವೆ.
ಇಲ್ಲಿನ ಬೇಗರಾಜಪುರ ಗ್ರಾಮದಲ್ಲಿ ವಾಸಿಸುತ್ತಿದ್ದ ರೈತರು ಸಮೀಪದ ಮಂಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಹಿಂತಿರುಗುತ್ತಿದ್ದಾಗ ಟ್ರ್ಯಾಕ್ಟರ್ ಚಕ್ರವೊಂದು ಕಳಚಿ ಬಿದ್ದ ಪರಿಣಾಮ ಟ್ರ್ಯಾಕ್ಟರ್ ಸೇತುವೆಯಿಂದ ನದಿಗೆ ಬಿದ್ದಿದೆ ಎನ್ನಲಾಗಿದೆ.
ಪತ್ರಿಕಾ ವಿತರಕರ ಗಣೇಶ್ ಸಾವು: ಕೆಯುಡಬ್ಲ್ಯೂಜೆ ಮನವಿಗೆ ಸ್ಪಂದಿಸಿ 2 ಲಕ್ಷ ರೂ ಬಿಡುಗಡೆಗೆ ಕಾರ್ಮಿಕ ಸಚಿವ ಆದೇಶ