ಬೆಂಗಳೂರು: ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ಯಶಸ್ಸಿನ ಬಳಿಕ ರಾಜ್ಯ ಕಾಂಗ್ರೆಸ್ ನಾಯಕರು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಟ್ರ್ಯಾಕ್ಟರ್ ಯಾತ್ರೆ (Tractor Yatra) ನಡೆಸಲಿದ್ದಾರೆ.
ನಿನ್ನೆ ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ಟ್ರ್ಯಾಕ್ಟರ್ ಯಾತ್ರೆ ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದಲ್ಲಿ 2 ಟ್ರ್ಯಾಕ್ಟರ್ ಯಾತ್ರೆಗಳು ನಡೆಯಲಿದ್ದು, ಕಡಿಮೆ ಅವಧಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವನ್ನು ತಲುಪುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ದಕ್ಷಿಣ ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ. ಶೀಘ್ರದಲ್ಲಿ ಅಧಿಕೃತ ಘೋಷಣೆಯಾಗಲಿದೆಇನ್ನೂ ಉತ್ತರ ಕರ್ನಾಟಕದ ಬಸವಕಲ್ಯಾಣದಿಂದ ಸಿದ್ಧರಾಮಯ್ಯ ಬಸ್ ಯಾತ್ರೆಯನ್ನು ಆರಂಭಿಸೋ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಭಾಗದಿಂದ ಡಿ.ಕೆ ಶಿವಕುಮಾರ್ ಆರಂಭಿಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರು ನಡೆಸಲಿರುವಂತ ಬಸ್ ಯಾತ್ರೆಯು ಪ್ರತಿ ದಿನ 2 ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. ಕಾಂಗ್ರೆಸ್ ಆಡಳಿತದ ಸರ್ಕಾರದ ಸಾಧನೆ ಸಹಿತ, ರಾಜ್ಯ ಬಿಜೆಪಿ ಸರ್ಕಾರದ 40% ಲಂಚಾವತಾರ, ಸೇರಿದಂತೆ ವಿವಿಧ ವಿಷಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಂತ ಕೆಲಸ ಮಾಡಲಿದೆ ಎಂದು ಹೇಳಲಾಗುತ್ತಿದೆ .
‘ದೇವೇಗೌಡರ ಮುಂದೆ ಯಾವುದೇ ಗಂಡೆದೆ ಇಲ್ಲ’ : ಸಚಿವ ಅಶೋಕ್ ಹೇಳಿಕೆಗೆ H.D ಕುಮಾರಸ್ವಾಮಿ ತಿರುಗೇಟು