ನವದೆಹಲಿ:” ಅಮೆರಿಕದೊಂದಿಗಿನ ಮಧ್ಯಂತರ ವ್ಯಾಪಾರ ಒಪ್ಪಂದವು ರೈತರು ಮತ್ತು ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ತೆರೆಯುವ ಮೂಲಕ ‘ಮೇಕ್ ಇನ್ ಇಂಡಿಯಾ’ವನ್ನು ಬಲಪಡಿಸುತ್ತದೆ ಮತ್ತು ಮಹಿಳೆಯರು ಮತ್ತು ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಭಾರತ ಮತ್ತು ಯುಎಸ್ ನಡುವಿನ ದೃಢವಾದ ಸಂಬಂಧಕ್ಕೆ ವೈಯಕ್ತಿಕ ಬದ್ಧತೆಗಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು.
“ಭಾರತ ಮತ್ತು ಅಮೆರಿಕಕ್ಕೆ ಸಿಹಿ ಸುದ್ದಿ! ನಮ್ಮ ಎರಡು ಮಹಾನ್ ರಾಷ್ಟ್ರಗಳ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ನಾವು ಒಪ್ಪಿಕೊಂಡಿದ್ದೇವೆ” ಎಂದು ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Great news for India and USA!
We have agreed on a framework for an Interim Trade Agreement between our two great nations. I thank President Trump for his personal commitment to robust ties between our countries.
This framework reflects the growing depth, trust and dynamism of… https://t.co/zs1ZLzamhd
— Narendra Modi (@narendramodi) February 7, 2026








