ಮಡಿಕೇರಿ: ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರು ವ್ಯಾಪಾರ ವಹಿವಾಟು ನಡೆಸಬಾರದು ಎಂದು ಹಿಂದೂ ಸಂಘಟನೆ ಹಾಗೂ ಭಜರಂಗದಳದವರು ಎಚ್ಚರಿಕೆ ನೀಡಿದ್ದಾರೆ.
ಆದರೆ ಹಿಂದೂಗಳ ಆಧಾರ್ ಕಾರ್ಡ್ಗಳನ್ನು ಬಳಸಿಕೊಂಡು ಅನ್ಯಕೋಮಿನ ಯುವಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದುದು ಬೆಳಕಿಗೆ ಬಂದಿದೆಇಂದು ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ಹರಿಹರ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯದ ವಾರ್ಷಿಕೋತ್ಸವ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ 4 ದಿನಗಳ ಹಿಂದೆಯೇ ಹಿಂದೂಯೇತರರು ವ್ಯಾಪಾರ ವಹಿವಾಟು ನಡೆಸಬಾರದು ಎಂಬ ಎಚ್ಚರಿಕೆ ನೀಡಲಾಗಿತ್ತು. ಒಂದು ವೇಳೆ ವ್ಯಾಪಾರ ನಡೆಸಲು ಬಂದರೆ ಅದರ ಪರಿಣಾಮ ಬೇರೆ ರೀತಿಯಲ್ಲಿ ಎದುರಿಸಬೇಕಾಗುತ್ತದೆ ಎಂದು ಖಡಕ್ ಆಗಿ ಹಿಂದೂ ಸಂಘಟನೆ ಪ್ರಮುಖರು ಎಚ್ಚರಿಕೆ ನೀಡಿದ್ದರು.