ಬೆಂಗಳೂರು: ನಗರದಲ್ಲಿ ಇಂದಿನಿಂದ ಬಿಬಿಎಂಪಿಯಿಂದ ಕೆಲ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ಸಂಚಾರವನ್ನು ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಆಗಸ್ಟ್.21ರವರೆಗೆ ಬಂದ್ ಮಾಡಲಾಗುತ್ತಿದೆ.
ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ಸರ್ವಿಸ್ ರಸ್ತೆಯಲ್ಲಿ ದಿನಾಂಕ 18-08-2024ರಿಂದ 21-08-2024ರವರೆಗೆ ಬಿಬಿಎಂಪಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದಿದೆ.
ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಹಿನ್ನಲೆಯಲ್ಲಿ ಇಂದಿನಿಂದ ಆಗಸ್ಟ್.21ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸರ್ವಿಸ್ ರಸ್ತೆಯು ಸಾರ್ವಜನಿಕರ ಬಳಕೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.
ಹೀಗಿದೆ ಪರ್ಯಾಯ ಸಂಚಾರದ ಮಾರ್ಗಗಳು
ಇನ್ನೂ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳದ ಕಡೆಗೆ ಸಂಚರಿಸುವ ವಾಹನ ಸವಾರರು ಹೊರ ವರ್ತುಲ ರಸ್ತೆಯ ಮುಖ್ಯ ಪಥವನ್ನೇ ಪರ್ಯಾಯ ರಸ್ತೆಯನ್ನಾಗಿ ಬಳಸಿಕೊಂಡು ಸಾಗುವಂತೆ ಸೂಚಿಸಲಾಗಿದೆ.
ರಾಜ್ಯ ಸರ್ಕಾರದಿಂದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ
ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!