ಬೆಂಗಳೂರು : ಬೆಂಗಳೂರು ವಿವಿ ಕ್ಯಾಂಪಸ್ನಲ್ಲಿ (Bengaluru VV) ನಡೆದ ಸಾಲು ಸಾಲು ಅಪಘಾತದ ಹಿನ್ನೆಲೆ ಖಾಸಗಿ ವಾಹನಗಳ ಓಡಾಟಕ್ಕೆ ಸಮಯ ನಿಗದಿ ಮಾಡಲು ನಿರ್ಧರಿಸಲಾಗಿದೆ.
ಪ್ರಕರಣ ಸಂಬಂಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದು, ಸಭೆಯಲ್ಲಿ ಸೆಕ್ಯುರಿಟಿ ಕಮಿಟಿ ರಚನೆಗೆ ಸಲಹೆ ನೀಡಲಾಗಿದೆ. ವಿವಿ ಕ್ಯಾಂಪಸ್ ನಲ್ಲಿ ನಾಳೆಯಿಂದ ಟ್ರಾಫಿಕ್ ರೂಲ್ಸ್ ಜಾರಿಗೆ ಬರಲಿದೆ. ಕ್ಯಾಂಪಸ್ ನಲ್ಲಿ ಹೆಲ್ಮೆಟ್, ಡ್ರಂಕ್ ಮತ್ತು ಡ್ರೈವ್ ತ್ರಿಬಲ್ ರೈಡಿಂಗ್, ಬಗ್ಗೆ ತಪಾಸಣೆ ಮಾಡಲಾಗುವುದು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಈ ನಿಯಮ ಅನ್ವಯ ಎಂದು ಡಿಸಿಪಿ ಲಕ್ಷ್ಮಣ್ ನಿಂಬರಗಿ ಹೇಳಿದರು
ಸಭೆಯಲ್ಲಿ ಸೆಕ್ಯುರಿಟಿ ಕಮಿಟಿ ರಚನೆಗೆ ಸಲಹೆ ನೀಡಲಾಗಿದೆ ಸೆಕ್ಯುರಿಟಿ ಕಮಿಟಿಗೆ ಸೂಪರ್ವೈಸರ್ ಬೇಕಾಗುತ್ತೆ. ಹೆಚ್ಚುವರಿ ಹೋಂಗಾರ್ಡ್ಗಳ ನಿಯೋಜನೆ ಬಗ್ಗೆ ಚರ್ಚಿಸಲಾಗಿದೆ ಎಂದರು.
ವಾಹನ ಸಂಚಾರಕ್ಕೆ ಸಮಯ ನಿಗದಿ
ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿತ್ತು.
ಈ ಹಿನ್ನೆಲೆ ಇಂದು ನಡೆದ ಸಭೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಮಾತ್ರ ಖಾಸಗಿ ವಾಹನಗಳ ಓಡಾಟಕ್ಕೆ ಅನುಮತಿ ನೀಡುವ ಕುರಿತು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ತಕ್ಷಣವೇ ಜಾರಿಗೆ ಬರಲಿದೆ ಎನ್ನಲಾಗಿದೆ.
ಇನ್ನೂ ಸಭೆಯಲ್ಲಿ . ವಾಹನಗಳ ಸ್ಪೀಡ್ ಕಂಟ್ರೋಲ್, ಕ್ಯಾಂಪಸ್ನಲ್ಲಿ 100 ಬ್ಯಾರಿಕೇಟ್ ಅಳವಡಿಕೆ ಹಾಗೂ ಎಂಟ್ರಿ ಹಾಗೂ ಎಕ್ಸಿಟ್ ಗೇಟ್ಗಳಲ್ಲಿ ಸೆನ್ಸಾರ್ ಕ್ಯಾಮರಾಗಳ ಅಳವಡಿಕೆ ನಿರ್ಧಾರ ಮಾಡಲಾಗಿದೆ.
ಬೆಂಗಳೂರು ವಿವಿ ಚೇಂಬರ್ನಲ್ಲಿ ಇಂದು ಸಭೆ ನಡೆಸಲಾಗಿದ್ದು, ಬೆಂಗಳೂರು ವಿವಿ ಕ್ಯಾಂಪಸ್ ಒಳಗೆ ಖಾಸಗಿ ವಾಹನಗಳನ್ನು ನಿಷೇಧ ಮಾಡುವ ವಿಚಾರದ ಬಗ್ಗೆ ಚರ್ಚೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ವಿವಿ ಕುಲಪತಿ ಜಯಕರ್, ಬಿಬಿಎಂಪಿ ಜಂಟಿ ಆಯುಕ್ತ ನಾಗರಾಜ್ , ಬಿಎಂಟಿಸಿ ಡಿವಿಜನಲ್ ಕಂಟ್ರೋಲರ್ ಶ್ರೀನಾಥ್ ಸೇರಿದಂತೆ ಮತ್ತಿತರಿದ್ದರು.
ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ,ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
BIGG NEWS : ಒಲಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣ ದಾಖಲು