ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಜಿಗೇನಹಳ್ಳಿಯಲ್ಲಿ ಪತ್ನಿ ಶೀಲ ಶಂಕಿಸಿ ವ್ಯಕ್ತಿ ಆಕೆಯನ್ನು ಕೊಂದು ನೇಣಿಗೆ ಶರಣಾದ ಘಟನೆ ನಡೆದಿದೆ.
ರೇಖಾ ಹತ್ಯೆಯಾದವರು. ಪತಿ ಕುಮಾರಸ್ವಾಮಿಯಿಂದ ಹತ್ಯೆ ಮಾಡಿದ್ದಾನೆ. ಹೆಂಡ್ತಿ ರೇಖಾನಿಗೆ ಕುಡುಗೋಲಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಕೊನೆಗೆ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.