ಹಾಸನ: ನಗರದಲ್ಲಿ ವ್ಹೀಲಿಂಗ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ. ಹಾಸನ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.
20 ವರ್ಷದ ಆಟೋ ಚಾಲಕ ಸುಮಂತ್ ಮೃತ ದುರ್ದೈವಿ.ಹಾಸನ ನಗರದ ನಿವಾಸಿ ಸುಮಂತ್ ಗವೇನಹಳ್ಳಿ ಬಳಿ ತನ್ನ ಬೈಕ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ವ್ಹೀಲಿಂಗ್ ಮಾಡದಂತೆ ಗವೇನಹಳ್ಳಿ ಗ್ರಾಮದ ಯುವಕರು ಹೇಳಿದ್ದಾರೆ. ಇದೇ ವಿಚಾರಕ್ಕೆ ಸುಮಂತ್ ಹಾಗೂ ಗವೇನಹಳ್ಳಿ ಗ್ರಾಮದ ಯುವಕರ ನಡುವೆ ಗಲಾಟೆ ಶುರುವಾಗಿದೆ.
ಅಲ್ಲೇ ಇದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಸುಮಂತ್ ಲಾಂಗ್ ಹಾಗೂ ಚಾಕುಗಳ ಜೊತೆ ತನ್ನ ಇಬ್ಬರು ಸ್ನೇಹಿತರನ್ನು ಕರೆದಕೊಂಡು ಗವೇನಹಳ್ಳಿಗೆ ಬಂದಿದ್ದಾನೆ. ವ್ಹೀಲಿಂಗ್ ಮಾಡುವುದನ್ನು ತಡೆದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಗ್ರಾಮದ ಪ್ರಜ್ವಲ್ ಮತ್ತು ಕೆಲವು ಯುವಕರು ಚಾಕು, ಲಾಂಗ್ ಕಿತ್ತುಕೊಂಡ ಸುಮಂತ್ ಎದೆ ಮತ್ತು ಹೊಟ್ಟೆಗೆ ಇರಿದಿದ್ದಾರೆ.ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ
BIGG NEWS: ಅಸ್ಸಾಂನ ಜೋರ್ಹತ್ ನಲ್ಲಿ 3.6 ತೀವ್ರತೆಯ ಲಘು ಭೂಕಂಪ | Earthquakes in Assam