ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಒಂದು ಸಂಭಾವಿಸಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಮುತ್ತುರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ
ದೊಡ್ಡಬಳ್ಳಾಪುರದ ಮುತ್ತೂರು ನಿವಾಸಿಯಾದ ಸೋಮಶೇಖರ (50) ಮೃತ ದುರ್ದೈವಿ ಆಗಿದ್ದು ನೀರಿನ ಟ್ಯಾಂಕ್ ವಾಲ್ ರಿಪೇರಿ ಮಾಡಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸೋಮಶೇಖರ್ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದರು. ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








