ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವಂತ ಬೆಳ್ಳಂದೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಡಿ ಎನ್ ಆರ್ ಅರಿಸ್ಟಾ ಎನ್ನುವಂತ ಕಟ್ಟಡವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಟ್ಟಡದ 13ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಪಶ್ಚಿಮ ಬಂಗಾಳ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಆಲಿ ಮೊಲ್ಲ(28) ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸಾವನ್ನಪ್ಪಿದಂತ ಇಬ್ಬರು ಕಾರ್ಮಿಕರು ಇಂಪ್ರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಟ್ಟಡದ ಕನ್ಟ್ರಕ್ಷನ್ ಕಾರ್ಯದಲ್ಲಿ ತೊಡಗಿದ್ದರು. ಈ ಸಂಬಂಧ ಈ ಕಂಪನಿಯ ಅಧಿಕಾರಿಗಳು, ಸೈಟ್ ಇಂಜಿನಿಯರ್ ವಿರುದ್ಧ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 2 ತಿಂಗಳೇ ಕಳೆದರು ಆರೋಗ್ಯ ಇಲಾಖೆಯ ‘NHM ನೌಕರ’ರಿಗಿಲ್ಲ ವೇತನ: ಕೂಡಲೇ ಬಿಡುಗಡೆಗೆ ಒತ್ತಾಯ
BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ