ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿಗಳು ಸಾವನ್ನಪ್ಪಿರುವ ಘಟನೆ ಯಲಘಟ್ಟ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದ ದ್ಯಾವಪ್ಪ ಸೂಗೂರು (35) ಹಾಗೂ ಶಿವಮ್ಮ (33) ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಸ್ವಂತ ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಮನೆ ಗೋಡೆ ಪ್ಲಾಸ್ಟರ್ ಮಾಡುತ್ತಿದ್ದ ವೇಳೆ ಮೆಟ್ಟಿಲು ಕುಸಿದು ಬಿದ್ದಿದೆ. ಅವಶೇಷಗಳ ಅಡಿ ಸಿಲುಕಿ ದಂಪತಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಟ್ಟಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








