ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪ್ರಿಯತಮೆಯ ಮನೆಯಲ್ಲಿಯೇ ಪ್ರಿಯಕರ ಒಬ್ಬ ಬೆಂಕಿಗೆ ಬಲಿಯಾಗಿದ್ದಾನೆ. 27 ವರ್ಷದ ಗಗನ್ ಶಂಕರ್ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪತ್ನಿಯಿದ್ದರು ಕೂಡ ಗಗನ ಶಂಕರ್ ಮತ್ತೊಬ್ಬಳನ್ನು ಪ್ರೀತಿಸುತ್ತಿದ್ದ. ಸೋಫಾ ಕೊಡಿಸುವ ವಿಚಾರಕ್ಕೆ ಪ್ರಿಯತಮೆ ಕಿರಿಕ್ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಗಲಾಟೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಗಗನ ಶಂಕರ್ ಬೆಂಕಿ ಹಚ್ಚಿಕೊಂಡಿದ್ದಾನೆ.
ತಕ್ಷಣಕ್ಕೆ ಬೆಂಕಿ ಆರಿಸಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕರಿಯಾಗದೆ ಗಗನ ಶಂಕರ್ ಸಾವನಪ್ಪಿದ್ದಾನೆ. ಆಸ್ಪತ್ರೆಯಲ್ಲಿ ಗಗನ ಶಂಕರ್ ಸಾವನ್ನಪಿದ್ದಾನೆ. ಪ್ರಿಯತಮೆ ಹಾಗೂ ಆಕೆಯ ಗಂಡನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾ ರೆ ಎನ್ನುವ ಆರೋಪ ಕೇಳಿ ಬಂದಿದೆ. ಮೃತನ ಪೋಷಕರು ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.








