ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಿಲಗುಂದ-ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಜಾನುವಾರುಗಳ ಮೈ ತೊಳೆಯುತ್ತಿದ್ದ ವೇಳೆ ಏಕಾಏಕಿ ಕಾಲು ಜಾರಿದ್ದು ಪ್ರತೀಕ್ (10) ಹಾಗೂ ಪ್ರಭಾಕರ್ (45) ಈಜು ಬರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಬೇಸಿಗೆ ರಜೆ ಹಿನ್ನೆಲೆ, ಪ್ರತೀಕ್ ರಜೆಗಾಗಿ ಮಾವ ಪ್ರಭಾಕರನ ಮನೆಗೆ ಬಂದಿದ್ದ. ಮಾವ ಮತ್ತು ಅಳಿಯ ಜಾನುವಾರುಗಳ ಮೈ ತೊಳೆಯಲು ಕೆರೆಗೆ ತೆರಳಿದ್ದರೆ, ಉಳಿದ ಕುಟುಂಬಸ್ಥರು ಕೃಷಿ ಚಟುವಟಿಕೆ ನಿಮಿತ್ತ ಗದ್ದೆಗೆ ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಿಂದ ಸ್ಥಳೀಯರಿಗೆ ಆಘಾತ ವ್ಯಕ್ತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.








