ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲೆಯ ಲಿಂಗಸುಗೂರು ತಾಲೂಕಿನ ಖೈರವಾಡಗಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದು, ಇಂದು ಯುವಕನ ಶವ ಪತ್ತೆಯಾಗಿದೆ.
ಖೈರವಾಡಗಿ ಗ್ರಾಮದ ಪರಶುರಾಮ ಗುಂಡಪ್ಪ ಅಕ್ಕಿ (22) ಮೃತ ಯುವಕ. ಈತ ಸ್ನೇಹಿತರೊಂದಿಗೆ ಈಜಲು ಹೋಗಿ ದಡಕ್ಕೆ ಬಾರದೇ ನಾಪತ್ತೆಯಾಗಿದ್ದರು. ಇದರಿಂದ ಆತಂಕಗೊಂಡ ಗೆಳೆಯರು ಪೊಲೀಸರಿಗೆ ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದರು. ನಿರಂತರ ಶೋಧ ಕಾರ್ಯ ಕೈಗೊಂಡ ಹಿನ್ನೆಲೆ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








