ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ ಕಾಲುಜಾರಿ ಬಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ.
ಮೃತ ವಿದ್ಯಾರ್ಥಿಯನ್ನು ಮದೀನಾ ಕಾಲೋನಿಯ ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಹಮ್ಮದ್ ತಮಿಮ್ (16) ಕೃಷಿ ಹೊಂಡದಲ್ಲಿ ಈಜು ಹೊಡೆಯಲು ಹೋಗಿ ನೀರು ಪಾಲಾಗಿರುವುದಾಗಿ ಎಂದು ತಿಳಿದುಬಂದಿದೆ. ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ.
ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ ಎಂದೂ ಹೇಳಲಾಗುತ್ತಿದೆ. ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆಂದು ವೈದ್ಯರು ಧೃಡಪಡಿಸಿದ್ದಾರೆ. ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನು ಬರೆದಿದ್ದ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








