ಚಿಕ್ಕಬಳ್ಳಾಪುರ : ಪಕ್ಕದ್ ಮನೆಯ ಯುವಕನನ್ನು ಪ್ರೀತಿಸಿ ಲವ್ ಮ್ಯಾರೇಜ್ ಆದ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಂಗಟಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹೌದು ಪಕ್ಕದ್ಮನೆ ಹುಡುಗ, ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಜಾತಿಯವರಾಗಿದ್ದು, ಮದುವೆಯಾಗಲು ಇಚ್ಚಿಸಿದ್ದರು. ಆದರೆ ಹುಡುಗಿ ಮನೆಯವರಿಗೆ ಈ ಮದುವೆ ಇಷ್ಟ ಇರಲಿಲ್ಲ. ಅವರ ವಿರೋಧದ ನಡುವೆ ಇಬ್ಬರೂ ಮದುವೆಯಾಗಿದ್ದಾರೆ. ಇದರಿಂದ ಕೆರಳಿದ ಹುಡುಗಿ ಮನೆಯವರು ಹುಡುಗನ ತಾಯಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಯ್ಯಮ್ಮ (48) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.