ಗುಜರಾತ್: ಗುಜರಾತ್ನ ವಡೋದರದ ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಗೋಧಿ ತುಂಬಿದ್ದ ಟ್ರಕ್ ಅನ್ನು ಓವರ್ಟೇಕ್ ಮಾಡಲು ಬಸ್ ಚಾಲಕ ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಸಂಪೂರ್ಣ ಜಖಂ ಆಗಿದೆ. ಮೃತಪಟ್ಟವರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರಲ್ಲಿ ಕೆಲವರ ಸ್ಥತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗಾಯಾಳುಗಳನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ರವಾನಿಸಲಾಗಿದೆ.
ಐಷಾರಾಮಿ ಬಸ್ ರಾಜಸ್ಥಾನದಿಂದ ಸೂರತ್ ಕಡೆಗೆ ಹೋಗುತ್ತಿದ್ದಾಗ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಲ್ಲಿ ಒಂದು ಮಗು, ಮಹಿಳೆ ಮತ್ತು ನಾಲ್ವರು ಪುರುಷರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Gujarat | At least six people died, and 15 were severely injured after a luxury bus collided with a trailer truck on Vadodara’s Kapurai Bridge national highway. The injured have been admitted to Vadodara’s SSG Hospital for treatment: Dr VL Tiwari, MLO, SSG Hospital pic.twitter.com/98CoKjNeLw
— ANI (@ANI) October 18, 2022
WATCH VIDEO: ಕಟ್ಟಡದ ಮೇಲೆ ಯುದ್ಧ ವಿಮಾನ ಪತನ ಬೆಂಕಿ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ Fighter jet crashes
BIGG NEWS: ಗುಜರಾತ್ ನಲ್ಲಿ ಮತದಾರರನ್ನು ಓಲೈಸಲು ಮುಂದಾದ ಬಿಜೆಪಿ; ಸಿಎನ್ಜಿ, ಅಡುಗೆ ಅನಿಲದ ಮೇಲಿನ ತೆರಿಗೆ ಕಡಿತ