ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಹೀಗಾಗಿ ರೈಲಿನ ಹಿಂಭಾಗ ಸಂಪೂರ್ಣ ಜಖಂಗೊಂಡಿರುವಂತ ಘಟನೆ ಸಾದರಮಂಗಲ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.
ಬೆಂಗಳೂರಿನ ಸಾದರಮಂಗಲ ಬಳಿಯಲ್ಲಿ ಬಿಎಂಟಿಸಿ ಬಸ್ ಹಿಂದೆ ತೆಗೆದುಕೊಳ್ಳುತ್ತಿದ್ಗ ರೈಲು ಹಳಿಯ ಮೇಲೆ ನಿಂತಿತ್ತು. ಅದೇ ವೇಳೆಯಲ್ಲಿ ರೈಲು ಆಗಮಿಸಿದಾಗ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜಖಂ ಆಗಿದೆ. ಬಿಎಂಟಿಸಿ ಬಸ್ಸಿನಲ್ಲಿದ್ದಂತ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯವಾಗಿದೆ.








