ಬೆಂಗಳೂರು: ನಮ್ಮ ಮೆಟ್ರೋ ( Namma Metro ) ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ( Metro Train ) ಸಂಚಾರವು ಸ್ಥಗಿತಗೊಂಡಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ, ಹಳದಿ ಮಾರ್ಗದಲ್ಲಿ (ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ) ಮೆಟ್ರೋ ರೈಲುಗಳು ಸಂಜೆ 7:00 ಗಂಟೆಯಿಂದ ವೇಳಾಪಟ್ಟಿಯಂತೆ ಚಲಿಸುತ್ತಿಲ್ಲ. ಈ ಸೇವೆಗಳು ರಾತ್ರಿ 9:00 ಗಂಟೆಯ ವೇಳೆಗೆ ನಿಯಮಿತ ವೇಳಾಪಟ್ಟಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿದೆ.
ಈ ಅನಾನುಕೂಲತೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಯನ್ನು ನಿಜವಾಗಿಯೂ ಪ್ರಶಂಸಿಸುತ್ತೇವೆ ಎಂಬುದಾಗಿ ಹೇಳಿದೆ.
CRIME NEWS: ಮಂಡ್ಯದಲ್ಲಿ ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಕರಿಮಣಿ ಸರ ಕಿತ್ತುಕೊಂಡು ಕಳ್ಳ ಪರಾರಿ
Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ