ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಪದೋನ್ನತಿಗೆ ತರಬೇತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಹೌದು, ರಾಜ್ಯ ಸರ್ಕಾರದ ಗ್ರೂಪ್ ಎ, ಬಿ ಮತ್ತು ಸಿ ವೃಂದ ನೌಕರರ ಪದನ್ನೋತಿಗೆ ತರಬೇತಿ ಕಡ್ಡಾಯಗೊಳಿಸುವ ನಿಯಮಾವಳಿಗಳ ಕರಡು ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಲು ನೌಕರರಿಗೆ 15 ದಿನಗಳ ಕಾಲಾವಕಾಶ ನೀಡಿದೆ.
‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನಿಯಮಗಳು- 2025 ರ ಪ್ರಕಾರ, ಗ್ರೂಪ್ ಎ, ಬಿ ಮತ್ತು ಸಿ ವೃಂದದ ನೌಕರರ ಬಡ್ತಿಯ ಹಿಂದಿನ ವರ್ಷದಲ್ಲಿ ಕನಿಷ್ಠ 10 ದಿನಗಳ ಖುದ್ದು ತರಬೇತಿ ಕಡ್ಡಾಯವಾಗಿದೆ. ಆನ್ಲೈನ್ ಕಲಿಕಾ ವೇದಿಕೆಯನ್ನು ಪ್ರತಿ ವರ್ಷ ಕನಿಷ್ಠ ಸಂಖ್ಯೆಯ ಅಂಕಗಳನ್ನು ಗಳಿಸಬೇಕು. ಆಫ್ಲೈನ್ ತರಬೇತಿಗೆ ಅರ್ಜಿ ಸಲ್ಲಿಸಿದ್ದರೆ ಅವರನ್ನು ಅವರ ವೃಂದ ಜೇಷ್ಠತೆ ಕ್ರಮದಲ್ಲಿ ತರಬೇತಿಗೆ ಕಳುಹಿಸಬೇಕೆಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.