ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. 2020ರಂದು ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ ಎಂದರು.
ಐದು ವರ್ಷಗಳ ನಂತ್ರ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ನೀವೇ ಊಹಿಸಿ ಐದು ವರ್ಷಗಳಿಂದ ಎಷ್ಟು ಡೀಸೆಲ್ ದರ ಹೆಚ್ಚಳವಾಗಿದೆ ಅಂತ ಎಂದ ಅವರು, ಖರ್ಚು ವೆಚ್ಚ ಕೂಡ ಹೆಚ್ಚಳ ಆಗಿದೆ ಅಂತ ತಿಳಿಸಿದರು.
ಅಂದಹಾಗೇ ರಾಜ್ಯ ಸರ್ಕಾರಕ್ಕೆ ನಾಲ್ಕು ಸಾರಿಗೆ ನಿಗಮಗಳಿಂದ ಶೇ.42ರಷ್ಟು ಬಸ್ ಟಿಕೆಟ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಶೇ.15ರಷ್ಟು ಸಾರಿಗೆ ಬಸ್ ಪ್ರಯಾಣದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು.
BREAKING: ಕರ್ನಾಟಕ ಮಾಧ್ಯಮ ಅಕಾಡೆಮಿ 2023, 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ: ಇಲ್ಲಿದೆ ಪಟ್ಟಿ